7
PM Modi: 2 ದಿನಗಳ ಪ್ರವಾಸ ನಿಮಿತ್ತ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಮಿರ್ ಪುಟಿನ್ ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ ವಿಶೇಷ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದರು.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದರು.
ಪ್ರಧಾನಿ ಮೋದಿ ಅವರು X ನಲ್ಲಿ ಆ ಕ್ಷಣದ ಛಾಯಾಚಿತ್ರವನ್ನು ಹಂಚಿಕೊಂಡಿದ್ದು, “ಅಧ್ಯಕ್ಷ ಪುಟಿನ್ ಅವರಿಗೆ ರಷ್ಯನ್ ಭಾಷೆಯಲ್ಲಿ ಗೀತೆಯ ಪ್ರತಿಯನ್ನು ನೀಡಲಾಯಿತು. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತವೆ” ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.
