Home » ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ನಿಧನ

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ನಿಧನ

by Praveen Chennavara
0 comments

ಯುಎಇ: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಖಲೀಫಾ ಬಿನ್ ಝಾಯೆದ್ ಅವರ ನಿಧನವನ್ನು ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ.

ಶೇಖ್ ಖಲೀಫಾ ಅವರು ಯುಎಇಯ ಎರಡನೇ ಅಧ್ಯಕ್ಷರಾಗಿದ್ದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಶೇಖ್ ಖಲೀಫಾ ಬಿನ್ ಝಾಯೆದ್ ನಿಧನದ ಹಿನ್ನೆಲೆಯಲ್ಲಿ ಯುಎಇಯಲ್ಲಿ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ.

ಶೇಖ್ ಖಲೀಫಾ ಬಿನ್ ಝಾಯೆದ್ ನಿಧನಕ್ಕೆ ಸೌದಿ ಅರೇಬಿಯಾದ ದೊರೆ ಸಲ್ಮಾನ್ ಮತ್ತು ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್, ಅಬುಧಾಬಿ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್, ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್-ಮತ್ತೂಮ್ ಸಂತಾಪ ಸೂಚಿಸಿದ್ದಾರೆ.

You may also like

Leave a Comment