ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ವಿಜಯನಗರ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆ ಮತ್ತು 48 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.
ಉದ್ಯೋಗ ಜಿಲ್ಲೆ : ವಿಜಯನಗರ ಜಿಲ್ಲೆ
ಹುದ್ದೆಗಳ ವಿವರ : ಅಂಗನವಾಡಿ ಕಾರ್ಯಕರ್ತೆ: 15
ಅಂಗನವಾಡಿ ಸಹಾಯಕಿ: 48
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ: 07-09-2022.
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 06-10-2022 ರ ಸಂಜೆ 05-30 ರವರೆಗೆ.
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ: 10ನೇ ತರಗತಿ ಉತ್ತೀರ್ಣ.
ಅಂಗನವಾಡಿ ಸಹಾಯಕಿ: ಕನಿಷ್ಟ 4ನೇ ತರಗತಿ ಉತ್ತೀರ್ಣ.
ಸಹಾಯಕಿ ಹುದ್ದೆಗೆ ಗರಿಷ್ಟ 9ನೇ ತರಗತಿವರೆಗೆ ತೇರ್ಗಡೆ ಹೊಂದಿರುವವರು ಅರ್ಜಿ ಹಾಕಬಹುದು. ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಹಾಕಲು ಅವಕಾಶ ಇಲ್ಲ.
ವಯಸ್ಸಿನ ಅರ್ಹತೆ: ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ
