Constable recritement : 1420 ಲೇಡಿ ಕಾನ್ಸ್ಟೇಬಲ್ (Constable recritement ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆ (West Bengal Police Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 23, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೇ 22, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆ- ಲೇಡಿ ಕಾನ್ಸ್ಟೇಬಲ್
ಒಟ್ಟು ಹುದ್ದೆ- 1420
ವೇತನ- ಮಾಸಿಕ ₹ 22,700- 58,500
ಉದ್ಯೋಗದ ಸ್ಥಳ- ಕೊಲ್ಕತ್ತಾ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 22/05/2023
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಭ್ಯರ್ಥಿಯನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಷರತ್ತುಗಳು ಅನ್ವಯ.
ಇದನ್ನು ಓದಿ: Chicken Gunya: ಯಾದಗಿರಿ ಜಿಲ್ಲೆಗೆ ಕಂಟಕವಾಗಿದ್ಯಾ “ಚಿಕನ್ ಗುನ್ಯಾ” ? 100 ಕ್ಕೂ ಹೆಚ್ಚು ಜನರು ನರಳಾಟ.!
