SBI Clerk Recruitment 2023: ಬ್ಯಾಂಕಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳೇ ಗಮನಿಸಿ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಶೀಘ್ರದಲ್ಲೇ 5000 ಎಸ್‌ಬಿಐ ಕ್ಲರ್ಕ್ ಹುದ್ದೆಗಳ( SBI Clerk Recruitment 2023)ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಮೊನ್ನೆಯಷ್ಟೆ 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿತ್ತು. ಇದೀಗ ಶೀಘ್ರದಲ್ಲೇ ಸುಮಾರು 5000 ಕ್ಲರ್ಕ್ ಪೋಸ್ಟ್‌ಗಳ ಭರ್ತಿಗೆ ಅಧಿಸೂಚಿಸುವ (SBI Clerk Notification)ಸಾಧ್ಯತೆ ಇದೆ.
ಹುದ್ದೆಯ ವಿವರ
ಹುದ್ದೆಗಳು: 5000
ಹುದ್ದೆ: SBI ಕ್ಲರ್ಕ್
ವೇತನ ಶ್ರೇಣಿ : ರೂ.17,900 – 47,920
ಮೇಲೆ ತಿಳಿಸಿದ ಹುದ್ದೆಗೆ ಅತೀ ಶೀಘ್ರದಲ್ಲಿ ಅಧಿಸೂಚನೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಆಸಕ್ತರು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಅತೀ ಶೀಘ್ರದಲ್ಲಿ SBI 5000 ಕ್ಲರ್ಕ್ (ಜೂನಿಯರ್ ಅಸೋಸಿಯೇಟ್ಸ್ – ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಪೋಸ್ಟ್‌ಗಳಿಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆಯಿದೆ. ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ಅರ್ಹತಾ ಮಾನದಂಡಗಳ ಕುರಿತ ಮಾಹಿತಿ ಇಲ್ಲಿದೆ.
# ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
# ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ ಅಥವಾ ಕೊನೆಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ಬಳಿಕ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
# ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 28 ವರ್ಷ ಮೀರಿರಬಾರದು.
# ಸರ್ಕಾರದ ಆದೇಶದಂತೆ ವರ್ಗಾವಾರು ವಯೋಮಿತಿ ಸಡಿಲಿಕೆ ಇರಲಿದೆ.
ಎಸ್‌ಬಿಐ ಕ್ಲರ್ಕ್ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ, ಆನ್‌ಲೈನ್ ಪ್ರಿಲಿಮ್ಸ್ ಪರೀಕ್ಷೆ, ಮೇನ್ಸ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಲಾಗುತ್ತದೆ.ಪೂರ್ವಭಾವಿ ಪರೀಕ್ಷೆ / ಮುಖ್ಯ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,900 – 47,920 ವರೆಗೆ ವೇತನ ಸಿಗಲಿದೆ. ಹೆಚ್ಚಿನ ಮಾಹಿತಿಗೆ SBI ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
ಇದನ್ನೂ ಓದಿ: ಲೋಕ ಸಮರದಲ್ಲಿ ಗೆದ್ದು, ಅಧಿಕಾರಕ್ಕೆ ಬರುವುದು ಯಾವ ಪಕ್ಷ ಗೊತ್ತಾ? ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ
