Home » ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶ | 500 ಪ್ರೊಬೆಷನರಿ ಆಫೀಸರ್ ಗಳ ನೇಮಕ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶ | 500 ಪ್ರೊಬೆಷನರಿ ಆಫೀಸರ್ ಗಳ ನೇಮಕ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!

by Mallika
0 comments

ಬ್ಯಾಂಕ್ ನಲ್ಲಿ ಹುದ್ದೆ ಬೇಕು ಎನ್ನುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಹೌದು, ಬ್ಯಾಂಕ್ ಆಫ್ ಬರೋಡಾವು ಬರೋಬ್ಬರಿ 500 ಪ್ರೊಬೆಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರೊಬೇಷನರಿ ಆಫೀಸರ್ ಹುದ್ದೆಗಳ ವಿವರ :
ಕ್ರೆಡಿಟ್ ಆಫೀಸರ್ ಇನ್ ಜೆನೆರಲ್ ಬ್ಯಾಂಕಿಂಗ್ ಸ್ಟ್ರೀಮ್ : 350
ಐಟಿ ಆಫೀಸರ್ ಇನ್ ಸ್ಪೆಷಲಿಸ್ಟ್‌ ಸ್ಟ್ರೀಮ್ : 150

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-02-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25-02-2023
ಭರ್ತಿ ಮಾಡಿದ ಆನ್‌ಲೈನ್‌ ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ: 12-03-2023
ಆನ್‌ಲೈನ್‌ ಪರೀಕ್ಷೆಯ ಸಂಭಾವ್ಯ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 29 ವರ್ಷ ವಯಸ್ಸು ಮೀರಬಾರದು.

ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.

ಅರ್ಜಿ ಶುಲ್ಕ : ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ ರೂ.850. EWS / ಒಬಿಸಿ ಕೆಟಗರಿ ಅಭ್ಯರ್ಥಿಗಳಿಗೆ ರೂ.850.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ರೂ.175. ಅಭ್ಯರ್ಥಿಗಳು ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಲು ಅವಕಾಶವಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕೃತ ವೆಬ್‌ಸೈಟ್‌ ವಿಳಾಸ : https://bankofindia.co.in/ ಗೆ ಭೇಟಿ ನೀಡಬಹುದು.

You may also like

Leave a Comment