Home » BMRCL ನಲ್ಲಿ ಉದ್ಯೋಗವಕಾಶ ; ಸಹಾಯಕ ಇಂಜಿನಿಯರ್ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

BMRCL ನಲ್ಲಿ ಉದ್ಯೋಗವಕಾಶ ; ಸಹಾಯಕ ಇಂಜಿನಿಯರ್ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

by Mallika
0 comments

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (ಬಿಎಂಆರ್‌ಸಿಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 6 ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 40 ರಿಂದ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 65,000/-ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಸಂಸ್ಥೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಂತರ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ ಕಚೇರಿ ವಿಳಾಸಕ್ಕೆ ಮೇ 11,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
General Manager (HR), Bangalore Metro Rail
Corporation Limited, III Floor, BMTC Complex, K.H Road, Shanthinagar, Bangalore – 560027.

You may also like

Leave a Comment