Teacher Jobs: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ (School Education Department) ಯು ಸಿಹಿಸುದ್ದಿಯೊಂದನ್ನು ನೀಡಿದೆ.
ಮಾ.9 ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ಕುರಿತು 2023ರ 1:1 ಅನುಪಾತದ ಅರ್ಹ ಅಭ್ಯರ್ಥಿಗಳಿಗೆ ಅ.21ರಂದು ಕೌನ್ಸಲಿಂಗ್ ಇರುತ್ತದೆ. ಅ.21ರ ಬೆಳಗ್ಗೆ 10.30ಕ್ಕೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೌನ್ಸಲಿಂಗ್ ನಡೆಯಲಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಯನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳನ್ನು ಹೊರತು ಪಡಿಸಿ ಕೌನ್ಸಲಿಂಗ್ ನಡೆಯಲಿದೆ.
ಇಲಾಖೆ ವೆಬ್‌ಸೈಟ್ ಅ.19 ಅರ್ಹ ಅಭ್ಯರ್ಥಿಗಳ ವಿವರಗಳನ್ನು http://schooleducation.karnataka.gov.in ಇಲ್ಲಿ ಪ್ರಕಟ ಮಾಡಲಾಗುತ್ತದೆ.
