ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು.
ಅಭ್ಯರ್ಥಿಗಳು ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ https://bcwd.karnataka.gov.in ನಲ್ಲಿ ಪಡೆದು ಜುಲೈ 30 ರಂದು ರೊಳಗಾಗಿ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲೆ 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ 08382-226589, ಕೇಂದ್ರ ಕಚೇರಿ 8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
