2
Job Alert: ಕೊಡಗು ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸಲು ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ಮಡಿಕೇರಿ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ (Job Alert) ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಕೊಡಗು ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಇಲ್ಲಿ ನೀಡಲಾಗಿರುವ ಲಿಂಕ್ ಅಥವಾ QR ಕೋಡ್ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
