Home » Karnataka GFGC Principal Recruitment 2022 Notification : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಬಿಡುಗಡೆ | ಒಟ್ಟು 310 ಹುದ್ದೆ

Karnataka GFGC Principal Recruitment 2022 Notification : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಬಿಡುಗಡೆ | ಒಟ್ಟು 310 ಹುದ್ದೆ

by Mallika
0 comments

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್‌-1 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹಾಜರಾಗಬೇಕಿರುತ್ತದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 16-12-2022
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-01-2023
ಇ-ಪೋಸ್ಟ್‌ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆ ದಿನಾಂಕ : 17-01-2023

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು : ಪ್ರಾಂಶುಪಾಲರು ಗ್ರೇಡ್‌-1 (ಯುಜಿ)
ಒಟ್ಟು ಹುದ್ದೆಗಳ ಸಂಖ್ಯೆ : 310

ರಾಜ್ಯವ್ಯಾಪಿ ಮಿಕ್ಕುಳಿದ ವೃಂದದ ಹುದ್ದೆಗಳ ಸಂಖ್ಯೆ : 265
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ಸಂಖ್ಯೆ : 45

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.5000.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ.5000.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಆದರೆ ಪ್ರಕ್ರಿಯೆ ಶುಲ್ಕ ರೂ.2500 ಪಾವತಿ ಮಾಡಬೇಕು.

ವಯಸ್ಸಿನ ಅರ್ಹತೆ : ಪರೀಕ್ಷಾ ಪ್ರಾಧಿಕಾರಕ್ಕೆ ಅರ್ಜಿಗಳನ್ನು ಸಲ್ಲಿಸುವುದಕ್ಕಾಗಿ ಇರುವ ಕೊನೆಯ ದಿನಾಂಕದಂದು 55 ವರ್ಷಗಳ ವಯಸ್ಸನ್ನು ಮೀರಿರಬಾರದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ ವಿಳಾಸ http://kea.kar.nic.in ಗೆ ಭೇಟಿ ನೀಡಿ, ನೇಮಕಾತಿ ಸೆಕ್ಷನ್‌ನಲ್ಲಿ ನೀಡಿದ ಲಿಂಕ್‌ ಬಳಸಿ, ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಅಧಿಸೂಚನೆ, ನೇಮಕಾತಿ ನಿಯಮಗಳು, ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

You may also like

Leave a Comment