Home » KPSC ಯಿಂದ ಗ್ರೂಪ್ ‘ಎ’ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಕಟ್ ಆಫ್ ಅಂಕ ಬಿಡುಗಡೆ

KPSC ಯಿಂದ ಗ್ರೂಪ್ ‘ಎ’ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಕಟ್ ಆಫ್ ಅಂಕ ಬಿಡುಗಡೆ

by Mallika
0 comments

ಕೆಪಿಎಸ್ಸಿ (ಕರ್ನಾಟಕ ಲೋಕಸೇವಾ ಆಯೋಗ) ದಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಗ್ರೂಪ್ ‘ಎ’ ವೃಂದದ ಸಹಾಯಕ ನಿಯಂತ್ರಕರು ಉಳಿಕೆ ಮೂಲ ವೃಂದ 48 + ಹೈದರಾಬಾದ್ ಕರ್ನಾಟಕ 6 ಹುದ್ದೆಗಳು ಒಟ್ಟು 54 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ಆಫ್ ಅಂಕಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಆಸಕ್ತರು http://kpsc.kar.nic.in/lists ನಲ್ಲಿ ನೋಡಬಹುದು. ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾದ 7 ದಿನಗಳೊಳಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-01 ಈ ವಿಳಾಸಕ್ಕೆ ಅಂಚೆ ಮುಖಾಂತರ ಅಥವಾ ಇ-ಮೇಲ್ kpsc-ka@nic.in ಮುಖಾಂತರ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಹಾಗೂ ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

You may also like

Leave a Comment