ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಘಟಗಿ ಕುಂದಗೋಳ ಹಾಗೂ ನವಲಗುಂದ, ಹುಬ್ಬಳ್ಳಿ ತಾಲೂಕುಗಳಲ್ಲಿ ಅರೆ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರೆ ಕಾನೂನು ಸ್ವಯಂ ಸೇವಕ ಹುದ್ದೆಗೆ ಇರುವ ಅರ್ಹತೆಗಳು
*ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು
*ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು
*ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು
*ಕಾನೂನು ಮಹಾವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು
*ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು
*ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂಧಿಗಳು ಮತ್ತು ಸ್ವ-ಸಹಾಯ ಸಂಘಗಳ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ.
ಇದೇ ಮಾರ್ಚ್ 15 ರೊಳಗಾಗಿ ಅಭ್ಯರ್ಥಿಗಳು ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
