8
Madikeri: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜ್‌ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಂಪ್ಯೂಟರ್ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಸಿಎ, ಬಿಇ ಇನ್ ಕಂಪ್ಯೂಟರ್ ಸೈನ್ಸ್, ಎಂ.ಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಕಲಿತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ವೇತನ: ರೂ.18,150 ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ.
ಅರ್ಜಿಯನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಬಸವನಹಳ್ಳಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 9845659909 ಗೆ ಸಂಪರ್ಕಿಸಬಹುದು ಎಂದು ಸೋಮವಾರ ಪೇಟೆ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
