Home » ಈಶಾನ್ಯ ಗಡಿ ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ | 5636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ |ಐಟಿಐ ಪಾಸಾದವರಿಗೆ ಆದ್ಯತೆ

ಈಶಾನ್ಯ ಗಡಿ ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ | 5636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ |
ಐಟಿಐ ಪಾಸಾದವರಿಗೆ ಆದ್ಯತೆ

by Mallika
0 comments

ಈಶಾನ್ಯ ಗಡಿ ರೈಲ್ವೆಯೂ 5636 ಆಕ್ಟ್ ಅಪ್ರೆಂಟಿಸ್ ಪೋಸ್ಟ್‌ಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಉದ್ಯೋಗ ಇಲಾಖೆ : ಭಾರತೀಯ ರೈಲ್ವೆ ಉದ್ಯೋಗ ರೈಲ್ವೆ ವಲಯ: ಈಶಾನ್ಯ ಗಡಿ ರೈಲ್ವೆ
ಹುದ್ದೆಗಳ ಹೆಸರು : ಅಪ್ರೆಂಟಿಸ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ : 5636

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಆನ್‌ಲೈನ್ ಅರ್ಜಿ ಸ್ವೀಕರಿಸುವ ಪ್ರಾರಂಭ ದಿನಾಂಕ: 01-06-2022
ಆನ್‌ಲೈನ್ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ: 30-06-2022

ವಿದ್ಯಾರ್ಹತೆ :  ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಜೊತೆಗೆ ಐಟಿಐ ವಿದ್ಯಾರ್ಹತೆ ಸರ್ಟಿಫಿಕೇಟ್ ನ್ನು NCVT | SCVT ಇಂದ ಪಡೆದಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಡೆದವರು, ಆಯಾ ಟ್ರೇಡ್‌ಗೆ ಅರ್ಜಿ ಹಾಕಬೇಕು.

ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಕೇಂದ್ರ ಸರ್ಕಾರದ ಅಪ್ರೆಂಟಿಸ್ ನಿಯಮಗಳ ಪ್ರಕಾರ ಜಾತಿವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ
ಮಾಡಲಾಗುತ್ತದೆ.

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100.
ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ
ನೀಡಲಾಗಿದೆ. ಅರ್ಜಿ ಶುಲ್ಕವನ್ನು ಪೋಸ್ಟಲ್ ಆರ್ಡರ್ ಮೂಲಕ, ಅಥವಾ ಆನ್‌ಲೈನ್ ಮೂಲಕ ಸಹ ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

You may also like

Leave a Comment