Home » PSI ನೇಮಕಾತಿ ಮರುಪರೀಕ್ಷೆ ಶೀಘ್ರದಲ್ಲೇ – ಗೃಹ ಸಚಿವ ಆರಗ ಜ್ಞಾನೇಂದ್ರ

PSI ನೇಮಕಾತಿ ಮರುಪರೀಕ್ಷೆ ಶೀಘ್ರದಲ್ಲೇ – ಗೃಹ ಸಚಿವ ಆರಗ ಜ್ಞಾನೇಂದ್ರ

0 comments

ಬೆಂಗಳೂರು: ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ನೇಮಕಾತಿಗೆ(PSI) ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ತಮ್ಮ ನಿವಾಸದಲ್ಲಿ ಮಾತನಾಡಿ ಪಿಎಸ್‍ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳು ಭರವಸೆ ಕಳೆದುಕೊಳ್ಳಬಾರದು ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಹೇಳಿದರು.

ಮರು ಪರೀಕ್ಷೆ ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ. ಪರೀಕ್ಷೆ ತಯಾರಿ ಮುಂದುವರೆಸಿ ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು.

You may also like

Leave a Comment