Home » Revenue Department recruits: 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ; ಸಿಎಂ ಸಿದ್ದರಾಮಯ್ಯ

Revenue Department recruits: 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ; ಸಿಎಂ ಸಿದ್ದರಾಮಯ್ಯ

0 comments
Government job

Revenue Department recruits: 9834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್‌ ನೀಡಲು ಸರಕಾರ ನಿರ್ಧಾರ ಮಾಡಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್‌ಬುಕ್‌ಗಳನ್ನು ನೀಡಲಾಗುತ್ತಿದೆ. ಗ್ರಾಮಾಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರಕಾರ ಹಂತ ಹಂತವಾಗಿ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಆಯ್ಕೆಯಾದ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದೇ ಒಂದು ರೂಪಾಯಿ ಲಂಚವಿಲ್ಲದೆ ಮಧ್ಯವರ್ತಿಗಳ ಹಾವಳಿ ಇಲ್ಲದೆ ಮಾಡಿದ್ದು, ನೇಮಕಗೊಂಡವರು ಕೂಡಾ ಜನರ ಸೇವೆ ಮಾಡುವಾಗ ಒಂದು ರೂಪಾಯಿ ಲಂಚ ಪಡೆಯದೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ ಎಂದು ವರದಿಯಾಗಿದೆ.

ಒಟ್ಟು 9834 ಗ್ರಾಮ ಆಡಳಿತಾಧಿಕಾರಿಗಳಿದ್ದು, 8003 ಜನ ಕೆಲಸ ಮಾಡುತ್ತಿದ್ದಾರೆ. ಹೊಸದಾಗಿ ಒಂದು ಸಾವಿರ ಜನ ಸೇರ್ಪಡೆಗೊಂಡಿದ್ದು, ಇನ್ನೂ 500 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

You may also like