KSRTC recruitment 2023 :ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ(Job) ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ, ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.
ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗೆ ನೇರವಾಗಿ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಹೀಗಿವೆ: ಆಧಾರ್ ಕಾರ್ಡ್, ವಾಹನ ಚಾಲನಾ ಪರವಾಣಿಗೆ ಪತ್ರ,ಭಾರೀ ಗಾತ್ರದ ವಾಹನ ಚಾಲನೆ ಅನುಜ್ಞಾ ಪತ್ರ , 4 ಪಾಸ್ ಪೋರ್ಟ್ ಫೋಟೊ ಮತ್ತು 7ನೇ ತರಗತಿ ಮೇಲ್ಪಟ್ಟ ತೇರ್ಗಡೆಯಾದ ಅಂಕಪಟ್ಟಿ ಬೇಕಾಗುತ್ತದೆ.
ಇದನ್ನೂ ಓದಿ: MESCOM Jobs: ಮೆಸ್ಕಾಂ ನಲ್ಲಿ ಭರ್ಜರಿ ಉದ್ಯೋಗವಕಾಶ! 200 ಹುದ್ದೆಗಳು, ಇಲ್ಲಿದೆ ಸಂಪೂರ್ಣ ವಿವರ!
