Home » DA: ರಾಜ್ಯ ಸರ್ಕಾರಿ ನೌಕರರಿಗೆ 2% ತುಟ್ಟಿಭತ್ಯೆ ಹೆಚ್ಚಳ !!

DA: ರಾಜ್ಯ ಸರ್ಕಾರಿ ನೌಕರರಿಗೆ 2% ತುಟ್ಟಿಭತ್ಯೆ ಹೆಚ್ಚಳ !!

0 comments

DA: ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಉಡುಗೊರೆ ನೀಡಲು ಮುಂದಾಗಿದ್ದು, ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಕುರಿತು ಎರಡು ದಿನದಲ್ಲಿ ಆದೇಶ ಪ್ರಕಟವಾಗಲಿದೆ ಎನ್ನಲಾಗಿದೆ.

 

ಹೌದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ 3 ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ ಬೆನ್ನಲ್ಲೇ ಕರ್ನಾಟಕ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡುವ ಮೂಲಕ ದೀಪಾವಳಿ ಹಬ್ಬಕ್ಕೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟಿದ್ದು, ತುಟ್ಟಿಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲು ಅನುಮೋದಿಸಿದೆ.

 

ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರಿ ನೌಕರರಿಗೆ ದಿನಾಂಕ 01-07-2025ರಿಂದ ಅನ್ವಯವಾಗುವಂತೆ ಶೇ.2ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

 

ಅಂದಹಾಗೆ ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮನವಿ ಮಾಡಿದ್ದರು.

You may also like