Home » Women Suicide : ವಿವಾಹಿತ ಮಹಿಳೆ ನೇಣಿಗೆ ಶರಣು! ಗಂಡನ ಮೇಲೆ ಕೊಲೆ ಆರೋಪ!

Women Suicide : ವಿವಾಹಿತ ಮಹಿಳೆ ನೇಣಿಗೆ ಶರಣು! ಗಂಡನ ಮೇಲೆ ಕೊಲೆ ಆರೋಪ!

0 comments
suicide case

Suicide Case: ದಿನಂಪ್ರತಿ ಒಂದಲ್ಲ ಒಂದು ಅಪರಾಧ(Crime) ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಬೆಂಗಳೂರಿನಲ್ಲಿ (Bengaluru) ವಿವಾಹಿತ ಮಹಿಳೆಯೊಬ್ಬರ(Women) ಶವ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ರೂಮ್‌ನ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪತಿ ಅರವಿಂದ್‌ ಬಾಗಿಲು ಒಡೆದು ನೋಡಿದಾಗ ರಶ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide case) ಮಾಡಿಕೊಂಡಿರುವ ಪ್ರಕರಣ ಮುನ್ನಲೆಗೆ ಬಂದಿದೆ.

ಮನೆಯಲ್ಲಿ ವಿವಾಹಿತ ಮಹಿಳೆ ಸುಬ್ರಹ್ಮಣ್ಯಪುರ ಸಮೀಪದ ಪೂರ್ಣಪ್ರಜ್ಞ ಲೇಔಟ್‌ ನಿವಾಸಿ ರಶ್ಮಿ(30) ಅವರ ಶವ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ, ಮೃತಳ ಪೋಷಕರು ಅಳಿಯನ ವಿರುದ್ಧ ಕೊಲೆ ಆರೋಪ ಮಾಡಿದ್ದು, ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹತ್ತು ವರ್ಷದ ಹಿಂದೆ ಮದ್ದೂರು ಮೂಲದ ರಶ್ಮಿ ಮತ್ತು ಶ್ರೀರಂಗಪಟ್ಟಣ ಮೂಲದ ಅರವಿಂದ್‌ ಅವರಿಗೆ ಮದುವೆಯಾಗಿದೆ. ಈ ದಂಪತಿಗೆ ಐದು ವರ್ಷದ ಒಂದು ಗಂಡು ಮಗುವಿದೆ. ಅರವಿಂದ್‌ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದು, ರಶ್ಮಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದಂಪತಿ ಕೆಲ ವರ್ಷಗಳಿಂದ ಪೂರ್ಣಪ್ರಜ್ಞ ಲೇಔಟ್‌ನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ 8.30ರ ಸುಮಾರಿಗೆ ಅರವಿಂದ್‌ ಹಾಗೂ ರಶ್ಮಿ ಜಗಳವಾಡಿದ್ದು ನಂತರ ರಶ್ಮಿ ರೂಮ್‌ಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಎಷ್ಟು ಹೊತ್ತಾದರೂ ರಶ್ಮಿ ಅವರ ರೂಮ್‌ ಬಾಗಿಲು ಬಡಿದರೂ ಬಾಗಿಲು ತೆರೆಯದ ಹಿನ್ನೆಲೆ ಮಾರನೇ ದಿನ ಬಾಗಿಲು ಒಡೆದು ನೋಡಿದಾಗ ರಶ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮುನ್ನಲೆಗೆ ಬಂದಿದೆ. ಈ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ಕುರಿತಾಗಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

You may also like

Leave a Comment