Home » ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 6 ಜನರ ದಾರುಣ ಸಾವು

ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 6 ಜನರ ದಾರುಣ ಸಾವು

0 comments

ಇಂದು ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ಯಾಂಕರ್, ಕಾರು ನಡುವೆ ಡಿಕ್ಕಿಯಾಗಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಲಿಂಗಸೂಗುರು ತಾಲೂಕಿನ ಹಟ್ಟಿ ಪಟ್ಟಣದವರು ಎಂದು ಗುರುತಿಸಲಾಗಿದೆ. ತೆಲಂಗಾಣದ ಕೊಡಂಗಲ್ ಜವಳ ಕಾರ್ಯಕ್ಕೆ ಹೋಗಿದ್ದರು. ಈ ವೇಳೆ ಗುರುಮಠಕಲ್ ಬಳಿ ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹ್ಮದ್ ವಾಜೀದ್ ಹುಸೇನ್ (39), ಮಹ್ಮದ್ ಮಜ‌ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಮತ್ತು ಉಮೇಜಾ (6ತಿಂಗಳು) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಬಾಲಕ ಮಹ್ಮದ್ ಪಾಜೀಲ್ ಹುಸೇನ್‌ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.

ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾದಲ್ಲಿ ಮಗಳ ಜವಳ ಕಾರ್ಯಕ್ರಮ ಮಾಡಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುವಾಗ ದುರಂತ ಸಂಭವಿಸಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಪಿಐ ದೌವಲತ್ ಕುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment