Home » ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್!!!ತೆರಿಗೆದಾರರ ಮನವಿ ಮೇರೆಗೆ ನಿಗದಿಪಡಿಸಿದ್ದ ಸಮಯ ವಿಸ್ತರಿಸಿದ ಕೇಂದ್ರ

ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್!!!ತೆರಿಗೆದಾರರ ಮನವಿ ಮೇರೆಗೆ ನಿಗದಿಪಡಿಸಿದ್ದ ಸಮಯ ವಿಸ್ತರಿಸಿದ ಕೇಂದ್ರ

0 comments

ಆಧಾರ್ ಗುರುತಿನ ಜೊತೆಗೆ ಪ್ಯಾನ್ ಕಾರ್ಡ್ ನ್ನು ಲಿಂಕ್ ಮಾಡಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಕೇಂದ್ರ ಸರಕಾರ ಮುಂದಿನ ವರ್ಷ 2022ರ ಮಾರ್ಚ್‌ವರೆಗೆ ವಿಸ್ತರಿಣೆ ಮಾಡಿ ಆದೇಶ ಹೊರಡಿಸಿದೆ.

ಕೋವಿಡ್-19 ಮಹಾಮಾರಿ ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ನಡುವೆ ಲಿಂಕ್ ಮಾಡಲು ಹಲವು ಅಡಚಣೆಗಳು ಎದುರಾಗಿದ್ದು, ಸದ್ಯ ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕ ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಅವಧಿ ವಿಸ್ತರಣೆ ಮಾಡಲಾಗಿದ್ದು, ಜನರು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ತಿಳಿಸಿದೆ.ಅಲ್ಲದೆ, ಐಟಿ ಕಾಯಿದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30, 2021 ರಿಂದ 2022 ರ ಮಾರ್ಚ್ 31, ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment