Home » AHVS Karnataka recruitment 2022 | ಒಟ್ಟು ಹುದ್ದೆ-250, ಅರ್ಜಿ ಸಲ್ಲಿಸಲು ಕೊನೆ ದಿನ-ನ.4

AHVS Karnataka recruitment 2022 | ಒಟ್ಟು ಹುದ್ದೆ-250, ಅರ್ಜಿ ಸಲ್ಲಿಸಲು ಕೊನೆ ದಿನ-ನ.4

0 comments

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ (AHVS)ದಲ್ಲಿ ಖಾಲಿರುವ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್‌ಲೈನ್‌ ಮೂಲಕ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು : ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ (AHVS)
ಹುದ್ದೆಗಳ ಸಂಖ್ಯೆ : 250
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಜೂನಿಯರ್ ವೆಟರ್ನರಿ ಇನ್ಸ್‌ಪೆಕ್ಟರ್ (ಪಶುವೈದ್ಯಕೀಯ ಸಹಾಯಕ)
ವೇತನ : ರೂ.21400-42000/- ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ :
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ (AHVS)ದ ಹುದ್ದೆಗಳಿಗಾಗಿ ಆಸಕ್ತ ಅಭ್ಯರ್ಥಿಗಳು B.V.Sc, B.V.Sc (AH), B.Sc ಅನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ (AHVS) ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 04, 2022 ರಂತೆ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ ವಿವರ :
2A, 2B, 3A, 3B ಅಭ್ಯರ್ಥಿಗಳು : 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು : 05 ವರ್ಷಗಳು

ಅರ್ಜಿ ಶುಲ್ಕ ವಿವರ :
ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳು : ರೂ.750/-
SC/ST/ಪ್ರವರ್ಗ-I/PH ಅಭ್ಯರ್ಥಿಗಳು : ರೂ.500/-

ಆಯ್ಕೆ ಪ್ರಕ್ರಿಯೆ :
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ (AHVS) ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ (AHVS) ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಅಧಿಕೃತ ವೆಬ್‌ಸೈಟ್‌ ಆದ ahvs.kar.nic.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-11-2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 06-11-2022

ಅಧಿಕೃತ ವೆಬ್‌ಸೈಟ್: ahvs.kar.nic.in

You may also like

Leave a Comment