Home » Grama One: ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ!!

Grama One: ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ!!

0 comments

Grama One: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯಲು ಹಾಗೂ ನಾಗರಿಕ ಸೇವೆಗಳನ್ನು ನೀಡಲು ಮತ್ತು,  ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್‌ಲೈನ್ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಗ್ರಾಮ ಒನ್ ಕೇಂದ್ರವನ್ನು ತೆರೆಯಲು ತಮ್ಮ ತಮ್ಮ ಊರುಗಳಲ್ಲಿ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹೌದು, ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಹಾಸನ, ಕಲಬುರಗಿ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಹಾಗಿದ್ರೆ ಯಾರೆಲ್ಲ ಅರ್ಜಿ ಹಾಕಲು ಅರ್ಹರು, ಏನೆಲ್ಲ ಉಪಕರಣಗಳು ಬೇಕು, ದಾಖಲೆಗಳು ಏನೆಲ್ಲ ಇರಬೇಕು ಎಂಬುದನ್ನು ನೋಡೋಣ.

ಯಾರು ಅರ್ಜಿ ಸಲ್ಲಿಸಬಹುದು?:

► ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

► ಅಭ್ಯರ್ಥಿಯು ಕನಿಷ್ಠ ದ್ವಿತೀಯ ಪಿಯುಸಿ ಶಿಕ್ಷಣವನ್ನು/ಸಮನಾದ ಶಿಕ್ಷಣ ಅರ್ಹತೆ ಹೊಂದಿರಬೇಕು.

► ಅರ್ಜಿದಾರ ಅಭ್ಯರ್ಥಿಯು ಗ್ರಾಮ ಒನ್ ಕೇಂದ್ರವನ್ನು ಪ್ರಾರಂಭಿಸಲು ಅವಶ್ಯವಿರುವ ಬಂಡವಾಳ ಹೂಡಿಕೆಗೆ ಸಿದ್ದವಿರಬೇಕು.

► ಗ್ರಾಮ ಒನ್ ಕೇಂದ್ರ ಪ್ರಾರಂಭಿಸಲು ಇಚ್ಚಿಸಿರುವ ಜಾಗವು ಸಾರ್ವಜನಿಕರಿಗೆ ಸುಲಭವಾಗಿ ಸಂಪರ್ಕಿಸುವಂತಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗಿರುವ ಗುರುತಿನ ಚೀಟಿಗಳು:

ಅಭ್ಯರ್ಥಿಯ ಆಧಾರ್ ಕಾರ್ಡ್‌

ಪಾನ್ ಕಾರ್ಡ್‌

ಬ್ಯಾಂಕ್ ಪಾಸ್ ಬುಕ್

ಅಂಗಡಿಯ ಪೋಟೋ

ವಿದ್ಯಾರ್ಹತೆ ಪ್ರಮಾಣ ಪತ್ರ

 ಕೇಂದ್ರ ಸ್ಥಾಪಿಸಲು ಬೇಕಾದ ಉಪಕರಣಗಳು

* ಲ್ಯಾಪ್ ಟಾಪ್/ಡೆಸ್ಕ್ ಟಾಪ್

* ಪ್ರಿಂಟರ್

* ಬಯೋಮೆಟ್ರಿಕ್ ಸ್ಕ್ಯಾನರ್

* ವೆಬ್ ಕ್ಯಾಮರಾ

* ವೈ-ಪೈ ರಿಸೀವರ್

* ಯುಪಿಎಸ್ ಬ್ಯಾಕಪ್

ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

Step 1: ಅಧಿಕೃತ ಜಾಲತಾಣದಲ್ಲಿ “Grama One Online Application” ಲಿಂಕ್ ಮೇಲೆ ಕ್ಲಿಕ್ ಮಾಡಿ.
Step 2: ಪೇಜ್‌ನ ಕೊನೆಯಲ್ಲಿ ಇರುವ “Register Now” ಬಟನ್ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನಮೂದಿಸಿ OTP ಪಡೆದು “Validate OTP” ಮಾಡಿ.
Step 3: ತೆರೆದ ಅರ್ಜಿ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
Step 4: ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ “Submit” ಬಟನ್ ಕ್ಲಿಕ್ ಮಾಡಿ.
Step 5: ಭವಿಷ್ಯದಲ್ಲಿ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಸಂಗ್ರಹಿಸಿಕೊಳ್ಳಿ.

You may also like