Home » Arun Kumar Puttila : ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಾಮ ಪತ್ರ ಸಲ್ಲಿಕೆ : ಸಾವಿರಾರು ಕಾರ್ಯಕರ್ತರಿಂದ ಮೆರವಣಿಗೆ

Arun Kumar Puttila : ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಾಮ ಪತ್ರ ಸಲ್ಲಿಕೆ : ಸಾವಿರಾರು ಕಾರ್ಯಕರ್ತರಿಂದ ಮೆರವಣಿಗೆ

0 comments
Arun Kumar Puttila

ಪುತ್ತೂರು: ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ (Arun Kumar Puttila) ಅವರು ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ನಡೆದ ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು,ಇದೊಂದು ಪಕ್ಷೇತರ ಅಭ್ಯರ್ಥಿ ಪರ ಇಷ್ಟೊಂದು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿರುವುದು ಇತಿಹಾಸವಾಗಿ ದಾಖಲಾಗಿದೆ.

ಮೆರವಣಿಗೆಯ ಮೊದಲು ಅರುಣ್ ಪುತ್ತಿಲ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪುತ್ತೂರಿನ ಹೃದಯಭಾಗವಾದ ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.ಹಿಂದೂ ಮುಖಂಡ ದುಷ್ಕರ್ಮಿಗಳಿಂದ ಹತ್ಯೆಯಾದ ದಿ.ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಮೂಲ್ಕಿ ಸಂತೋಷ್ ಶೆಟ್ಟಿ, ಕೆಮ್ಮಿಂಜೆ ಶ್ರೀಲಕ್ಷ್ಮೀಶ ತಂತ್ರಿಯವರು ಕಹಳೆ ಊದಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು.

ಬ್ಯಾಂಡ್, ವಾದ್ಯದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆ ಮೂಲಕ‌ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

You may also like

Leave a Comment