Home » ಬೆಂಗಳೂರು : ಬೆಳ್ಳಂಬೆಳಗ್ಗೆ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು : ಬೆಳ್ಳಂಬೆಳಗ್ಗೆ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ

0 comments

ಬೆಂಗಳೂರು : ಬನ್ನೇರುಘಟ್ಟ ರಸ್ತೆ ಅರಕೆರೆ ಗೇಟ್ ಬಳಿ ಇರುವ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ನಿರಂತರ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ.

ಮಾಲ್ ನ ಗ್ರೌಂಡ್ ಫ್ಲೋರ್ ನಲ್ಲಿರೋ ಸೂಪರ್ ಮಾರ್ಕೆಟ್ ‌ ನಲ್ಲಿರುವ ಸ್ಟೋರೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶಾಪಿಂಗ್ ಮಾಲ್ ಸಿಬ್ಬಂದಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.

ವೀಕೆಂಡ್ ಕರ್ಫ್ಯೂ ಇದ್ದಿದ್ದರಿಂದಾಗಿ ಶಾಪಿಂಗ್ ಮಾಲ್ ನಲ್ಲಿ ಯಾವುದೇ ಸಿಬ್ಬಂದಿ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

You may also like

Leave a Comment