Home » ಸಭಾಪತಿ ಬಸವರಾಜ ಹೊರಟ್ಟಿ ವಿರುದ್ದ ದೂರು ದಾಖಲು

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ದ ದೂರು ದಾಖಲು

by Praveen Chennavara
0 comments

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ ಗುಡಿಸಲಮನಿ ಅವರ ದೂರು ಆಧರಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮುಗದ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು ಬಸವರಾಜ ಹೊರಟ್ಟಿ ಅವರು ಕೈವಶ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿದೆ.

ಶಿಕ್ಷಣ ಟ್ರಸ್ಟ್, ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲು ಬಸವರಾಜ ಹೊರಟ್ಟಿ ಮುಂದಾಗಿದ್ದು, ಇದನ್ನು ಪ್ರಶ್ನಿಸಿದಕ್ಕೆ ಹಲ್ಲೆ ಮಾಡಿಸಿರುವುದಾಗಿ ಆರೋಪಿಸಲಾಗಿದೆ.

ಮುಗದ ಗ್ರಾಮದಲ್ಲಿ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ ಜಖಂಗೊಳಿಸಿ ಹಲ್ಲೆ ಮಾಡಿರುವುದಾಗಿ ಆರೋಪಿಸಿ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ

You may also like

Leave a Comment