5
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟಾಫ್ರಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆಲ್ಲಾ ಮುಖ್ಯ ಕಾರಣ, ಸಿಲಿಕಾನ್ ಸಿಟಿ ಮಂದಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಗಾಡಿ ಪಾರ್ಕ್ ಮಾಡಿ ನಿಲ್ಲಿಸುತ್ತಿದ್ದಾರೆ. ಇದು ಬೇರೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಟಾಫ್ರಿಕ್ ಸಮಸ್ಯೆ ಹೆಚ್ಚಾಗುತ್ತಿದೆ ಎನ್ನಲಾಗಿದೆ.
ಆದರೆ ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಹೊಸ ಪ್ಲಾನ್ ಮಾಡಿಕೊಂಡಿದೆ ಎಂದೇ ಹೇಳಬಹುದು. ಹಾಗಾಗಿ ಇನ್ಮುಂದೆ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಗಾಡಿಗಳನ್ನು ನಿಲ್ಲಿಸುವಂತಿಲ್ಲ. ಪೇ & ಪಾರ್ಕ್ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಸಜ್ಜಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ, ಈ ತಿರ್ಮಾನ ಕೈಗೊಳ್ಳಲಾಗಿದೆ. ನಗರಾಭಿವೃದ್ಧಿ, ಬೆಂಗಳೂರು ಪೊಲೀಸ್, ನಗರಾಭಿವೃದ್ಧಿ, ಬಿಬಿಎಂಪಿ ಆಯುಕ್ತ ಸೇರಿದಂತೆ ಹಲವರು ಸಭೆ ನಡೆಸಲಿಸದ್ದಾರೆ. ಈ ಸಭೆಯ ನಂತರ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ.
