Home » ಬೆಳ್ತಂಗಡಿ: ನಾರಾವಿ-ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ನಾರಾವಿ-ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ

0 comments

ಬೆಳ್ತಂಗಡಿ :ನಾರಾವಿ – ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.

ನಾರಾವಿಯಿಂದ ಅರಸಕಟ್ಟೆ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ತೆರಳುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.ಘಟನೆಯಲ್ಲಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.ವೇಣೂರು ಠಾಣಾ ಪೋಲಿಸರು ಘಟನಾ ಸ್ಥಳಕ್ಕಾಗಮಿಸಿದ್ದು,ಪರಿಶೀಲನೆ ನಡೆಸಿದ್ದಾರೆ.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಆಗಮಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ್ದಾರೆ.

You may also like

Leave a Comment