4
ಉಳ್ಳಾಲದ ಮಾಸ್ತಿಕಟ್ಟೆ ಬಳಿ ದ್ವಿಚಕ್ರ ವಾಹನದ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ.

ಮೃತನನ್ನು ಉಳ್ಳಾಲದ ಮದನಿ ನಗರದ ನಿವಾಸಿ ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ.
ಬೈಕ್ ಸವಾರನ ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿದ ಬೈಕ್, ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ.
ಆಟೋರಿಕ್ಷಾ ಒಂದನ್ನು ಓವರ್ ಟೇಕ್ ಮಾಡಲು ಹೋಗಿ, ಬೈಕ್ ರಸ್ತೆಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸವಾರನ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
