Home » ಬೆಳ್ತಂಗಡಿ: ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ!! ಯುವಕ ಸ್ಥಳದಲ್ಲೇ ಮೃತ್ಯು!!

ಬೆಳ್ತಂಗಡಿ: ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ!! ಯುವಕ ಸ್ಥಳದಲ್ಲೇ ಮೃತ್ಯು!!

0 comments

ಬೆಳ್ತಂಗಡಿ: ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಮಸೀದಿ ಬಳಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ.ಘಟನೆ ಬೆನ್ನಲ್ಲೇ ಅಪಘಾತ ಎಸಗಿದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು,ಕೂಡಲೇ ಸ್ಥಳೀಯರು ಬೆನ್ನಟ್ಟಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಅತಿವೇಗವೆ ಕಾರಣ ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಕೆಲಕಾಲ ಸಂಚಾರ ವ್ಯತ್ಯಯವಾಗಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment