Home » Salumarada Thimmakka: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಗೆ ಗೌರವ ಮುಂದುವರಿಕೆ; ಬಿಜೆಪಿ ಸರ್ಕಾರ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆಗೆ CM ಆದೇಶ

Salumarada Thimmakka: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಗೆ ಗೌರವ ಮುಂದುವರಿಕೆ; ಬಿಜೆಪಿ ಸರ್ಕಾರ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆಗೆ CM ಆದೇಶ

0 comments
Salumarada Thimmakka

ಸಾಲುಮರದ ತಿಮ್ಮಕ್ಕ: ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಹೌದು, ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರದ ಈ ಅವಧಿಯಲ್ಲಿ ವೃಕ್ಷಮಾತೆಯ ಸಾಲುಮರದ ತಿಮ್ಮಕ್ಕನಿಗೆ (ಸಾಲುಮರದ ತಿಮ್ಮಕ್ಕ) ಸಚಿವ ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಲಾಯಿತು. ಈ ಸ್ಥಾನವನ್ನು ನೂತನ ಕಾಂಗ್ರೆಸ್ ಸರ್ಕಾರ ಕೂಡ ಮುಂದುರೆಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಸಲಹೆಯಂತೆ ಸಲಹಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಂಪುಟ ಸಚಿವ ಸ್ಥಾನಮಾನವನ್ನು ಹಾಗೂ ಪರಿಸರ ರಾಯಭಾರಿಯಾಗಿ ಅವರನ್ನೇ ಮುಖ್ಯಮಂತ್ರಿಯನ್ನಾಗಿಸಿದ್ದಾರೆ.

 

ಜೊತೆಗೆ ಸಂಪುಟ ದರ್ಜೆ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯಗಳು ತಿಮ್ಮಕ್ಕಗೆ ಸಿಗಲಿದೆ, ವೇತನ ಮತ್ತು ಭತ್ಯೆ, ವಸತಿಗೃಹ, ಕಾರಿನಂತಹ ಸೌಲಭ್ಯಗಳು ಮುಂದುವರಿಯಲಿವೆ.

ಇನ್ನು ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ ಈ ಮಣ್ಣಿನ ಬಹುತ್ವವನ್ನು ನಾಶಪಡಿಸುತ್ತಿರುವ ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು, ಸ್ವಯಂ ಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸಿದ ಕೆಲಸಕ್ಕಾಗಿ ನಾಡಿನ ಸಾಹಿತಿಗಳು ಹಾಗೂ ಬರಹಗಾರರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಭಿನಂದಿಸಿದರು. ಈ ವೇಳೆ ಮುಖ್ಯಮಂತ್ರಿಗಳು ಅವರಿಗೆ ಕೆಲವು ಪ್ರಮುಖ ಭರವಸೆಗಳನ್ನು ನೀಡಿದ್ದಾರೆ.

ಭರವಸೆಗಳ ಪ್ರಕಾರ, ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯ ಅಕ್ಷಮ್ಯ, ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು.

ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ

ಕೊಡುವುದಿಲ್ಲ ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ

ಚರ್ಚಿಸಿ ನಿಷ್ಟುರ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು.

ಮುಖ್ಯವಾಗಿ ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಖಡಕ್ ಸೂಚನೆ ನೀಡಲಾಗಿದೆ ಎಂಬುದಾಗಿ ಭರವಸೆ ನೀಡಲಾಗಿದೆ.

 

ಇದನ್ನೂ ಓದಿ: ಮುಹೂರ್ತಕ್ಕೆ ನಿಮಿಷಗಳ ಹಿಂದೆ ಓಡಿ ಹೋದ ವಧು, ಹಠಕ್ಕೆ ಬಿದ್ದು 13 ದಿನ ಮಂಟಪದಲ್ಲಿ ಠಿಕಾಣಿ ಹೂಡಿದ ವರ !

You may also like

Leave a Comment