Chaitra Kundapura Fraud Case :ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ (Chaitra Kundapura Fraud Case)ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದು ಗೊತ್ತಿರುವ ಸಂಗತಿ. ಚೈತ್ರ ಕುಂದಾಪುರ ಬಂಧನದ ಬಳಿಕ ಅನೇಕ ರೋಚಕ ಮಾಹಿತಿಗಳು ಹೊರ ಬೀಳುತ್ತಿವೆ.
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆಗಿರುವ ಹಾಲಶ್ರೀ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದ ಹಾಗೆ ತಲೆ ಮರೆಸಿಕೊಂಡಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಚೈತ್ರ ಕುಂದಾಪುರ (Chaitra Kundapura) ಮತ್ತು ಗ್ಯಾಂಗ್ ವಂಚನೆ ಪ್ರಕರಣದ 3ನೇ ಆರೋಪಿ ಆಗಿದ್ದ ಹಾಲಾಶ್ರೀ ಸ್ವಾಮೀಜಿಯನ್ನು ಒಡಿಶಾದ ಕಟಕಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಮೊದಲು ಸ್ವಾಮಿಜಿಯ ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಇಂದು ಸಿಸಿಬಿ ಪೊಲೀಸರಿಂದ ಸ್ವಾಮೀಜಿ ಆತ್ಮೀಯ ಸಂಪರ್ಕದಲ್ಲಿದ್ದವರ ವಿಚಾರಣೆ ನಡೆಯುತ್ತಿದೆ. ಮಠದ ಕೆಲ ಆತ್ಮೀಯರು ಮತ್ತು ಚಾಲಕ ಸೇರಿ ಕೊನೆ ಕ್ಷಣದ ಕರೆಗಳ ಆಧಾರದ ಮೇರೆಗೆ ಸಿಸಿಬಿ ಅಧಿಕಾರ ಮುಂದಾಗಿದ್ದಾರೆ. ಸಿಸಿಬಿ ಕಣ್ಣು ತಪ್ಪಿಸಿ ಹಾಲಶ್ರೀ ಸ್ವಾಮೀಜಿ ತಲೆ ಮರೆಸಿಕೊಂಡಿದ್ದರು. ಕೆಲ ಸಮಯದ ಹಿಂದೆಯೇ ಸಿಸಿಬಿ ಪೊಲೀಸರು ಸ್ವಾಮಿಜಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ ಎನ್ನಲಾಗಿದೆ.ಇವರ ತನಿಖೆಯ ಬಳಿಕವಷ್ಟೇ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ಹೊರಬೀಳಲಿದೆ.
