Home » ರಾಜ್ಯದಲ್ಲಿ ಹೊಸ ವೈರಸ್ ಹೆಚ್ಚಾದರೆ ಶಾಲಾ-ಕಾಲೇಜು ಮತ್ತೆ ಬಂದ್!! ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರಾಜ್ಯದಲ್ಲಿ ಹೊಸ ವೈರಸ್ ಹೆಚ್ಚಾದರೆ ಶಾಲಾ-ಕಾಲೇಜು ಮತ್ತೆ ಬಂದ್!! ಶಿಕ್ಷಣ ಸಚಿವ ಬಿ.ಸಿ ನಾಗೇಶ್

0 comments

ರಾಜ್ಯಕ್ಕೂ ಹೊಸ ವೈರಸ್ ಎಂಟ್ರಿಯಾಗಿದ್ದು, ಈ ಮಧ್ಯೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಒಂದುವೇಳೆ ಪ್ರಕರಣಗಳು ಹೆಚ್ಚಾದಲ್ಲಿ ಶಾಲಾ ಕಾಲೇಜುಗಳನ್ನು ಮತ್ತೊಮ್ಮೆ ಮುಚ್ಚಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರತಿದಿನ ತಂಜ್ಞರಿಂದ ವರದಿ ತರಿಸಿಕೊಂಡು ಪರಿಶೀಲಿಸುತ್ತಿದ್ದೂ, ಕೋವಿಡ್ ಪ್ರಕರಣಗಳು ಹೆಚ್ಚಾದಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ. ಪೋಷಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂಬ ಹೇಳಿಕೆ ನೀಡಿದ್ದಾರೆ.

You may also like

Leave a Comment