Home » ದಕ್ಷಿಣ ಕನ್ನಡ : ಆ.8 ರವರೆಗೆ ನಿರ್ಬಂಧಗಳು ಜಾರಿ!

ದಕ್ಷಿಣ ಕನ್ನಡ : ಆ.8 ರವರೆಗೆ ನಿರ್ಬಂಧಗಳು ಜಾರಿ!

by Mallika
0 comments

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಆಗಸ್ಟ್ 05 ರಿಂದ 8ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಆ.05 ರಿಂದ 08 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಮುಚ್ಚುವುದು. ಮಾಲ್, ಚಿತ್ರಮಂದಿರಗಳು/ಸಿನೆಮಾ ಹಾಲ್, ಪಬ್‌ಗಳನ್ನು ಜಿಲ್ಲೆಯಾದ್ಯಂತ ಆ.05 ರಿಂದ 08ರವರೆಗೆ, ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ರವರೆಗೆ ಮುಚ್ಚುವುದು.

You may also like

Leave a Comment