Home » Dakshina Kannada: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನದಂದು ರಜೆ ನೀಡಲು ವಿಎಚ್ಪಿ ಮನವಿ!!

Dakshina Kannada: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನದಂದು ರಜೆ ನೀಡಲು ವಿಎಚ್ಪಿ ಮನವಿ!!

0 comments
Ram Mandir Construction

Dakshina Kannada: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ((Ayodhya Ram Mandir)) ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಇದರ ನಡುವೆ ವಿ.ಎಚ್.ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಾರ ಮಳಿಗೆಗಳು, ಹೊಟೇಲ್ ಉದ್ಯಮಿಗಳು, ಫ್ಯಾಕ್ಟರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಿಗೆ ರಜೆ ನೀಡುವಂತೆ ಮನವಿ ಸಲ್ಲಿಸಿದೆ.

 

ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಭಾಗವಹಿಸಲು ಅನುವು ಮಾಡಿಕೊಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಈ ನಿಟ್ಟಿನಲ್ಲಿ ಜ.22ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ಅವಧಿಯಲ್ಲಿ ರಜೆ‌ ನೀಡುವಂತೆ ವ್ಯಾಪಾರ ಮಳಿಗೆಗಳು, ಹೊಟೇಲ್ ಉದ್ಯಮಿಗಳು, ಫ್ಯಾಕ್ಟರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು, ಉದ್ಯಮಪತಿಗಳಲ್ಲಿ ವಿ‌.ಎಚ್.ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಅವರು ಮನವಿ ಸಲ್ಲಿಸಿದ್ದಾರೆ

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

.

You may also like

Leave a Comment