Home » Bengaluru Crime News: ಎದೆಗೆ ಗುಂಡು ಹಾರಿಸಿ ವಿದ್ಯಾರ್ಥಿ ಆತ್ಮಹತ್ಯೆ!!!

Bengaluru Crime News: ಎದೆಗೆ ಗುಂಡು ಹಾರಿಸಿ ವಿದ್ಯಾರ್ಥಿ ಆತ್ಮಹತ್ಯೆ!!!

1 comment
Bengaluru Crime News

Nelamangala Crime News: ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.

ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ವಿಶು ಉತ್ತಪ್ಪ (19) ಎಂಬಾತನೇ ಗನ್‌ನಿಂದ ಫೈರ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಡಗು ಮೂಲದ ತಮ್ಮಯ್ಯ ಎಂಬುವರು ನೈಸ್‌ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿ ಕೆಲಸ ಮಾಡುತ್ತಿದ್ದು. ಇವರು ಕಳೆದ ಹದಿನೈದು ವರ್ಷಗಳಿಂದ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಭವಾನಿನಗರದಲ್ಲಿ ವಾಸವಿದ್ದರು.

ಇದನ್ನು ಓದಿ: Bengaluru Crime News: ಬೆಳಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗಳ ಕಿಡ್ನ್ಯಾಪ್‌ ಮಾಡಿದ ವ್ಯಕ್ತಿ!!

ತಂದೆ ರೇಷನ್‌ ತರಲೆಂದು ಹೊರಗೆ ಹೋಗಿದ್ದರು. ಈ ಸಂದರ್ಭದಲ್ಲಿ ವಿಶು ಗನ್‌ನಿಂದ ಪೈಯರ್‌ ಮಾಡಿ, ತಂದೆಗೆ ಕರೆ ಮಾಡಿ, ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿ ಗಾಬರಿಯಿಂದ ಮನೆಗೆ ಬಂದ ತಂದೆ ನೋಡಿದಾಗ ವಿಶು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದಾನೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾನೆ ಎಂದು ವರದಿಯಾಗಿದೆ.

You may also like

Leave a Comment