2
ಗದಗ : ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಕೊಲೆ ಮಾಡಿದ ಘಟನೆಯೊಂದು ನಡೆದಿದೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಸಂದರ್ಭದಲ್ಲಿ ಯುವಕೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಗದಗದ ತೋಂಟದಾರ್ಯ ಮಠದ ಬಳಿ ನಡೆದಿದೆ.
27 ವರ್ಷದ ಸುದೀಪ್ ಮುಂಡೆವಾಡಿ ಎಂಬಾತನೇ ಕೊಲೆಯಾದ ಯುವಕ.
ನಾಲ್ಕು ಜನ ಕೈಕಾಲು ಹಿಡಿದುಕೊಂಡು ಹೊಟ್ಟೆ ಭಾಗ ಹಾಗೂ ಮರ್ಮಾಂಗಕ್ಕೆ ಓರ್ವ ಮನಬಂದಂತೆ ಚಾಕುವಿನಿಂದ ಚುಚ್ಚಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಸಂದೀಪ್ ಮೃತಪಟ್ಟಿದ್ದಾನೆ. ಪೊಲೀಸ್ ಮಾಹಿತಿ ಪ್ರಕಾರ ಹಣಕಾಸಿನ ವ್ಯವಹಾರವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
