Home » ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ

0 comments

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿ, ಒಂದು ವರ್ಷದ ಮಗು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ.

ಭಾನುವಾರ ಸಂಜೆ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದ ತಮ್ಮಣ್ಣನವರ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾದ ಪರಿಣಾಮ ಯಲ್ಲಪ್ಪ(35) ಸ್ಫೋಟದ ತ್ರೀವತೆಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಒಂದು ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು, ಮಗು ಸಹ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಇದೀಗ ಗಾಯಾಳು ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದ ತ್ರೀವತ್ರೆಗೆ ಮನೆಯ ಮೇಲ್ಛಾವಣಿ ಸಹ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಉಳಿದವರು ಪಾರಾಗಿದ್ದಾರೆ.

ಈ ಘಟನೆಯ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment