Home » 7th Pay Commission : 7 ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಅಸ್ತು | ಸರ್ಕಾರಿ ನೌಕರರಿಗೆ ಬಂಪರ್!

7th Pay Commission : 7 ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಅಸ್ತು | ಸರ್ಕಾರಿ ನೌಕರರಿಗೆ ಬಂಪರ್!

by Mallika
0 comments

ಜನವರಿ 2020 ರಿಂದ ಜೂನ್ 2021 ರವರೆಗೆ 18 ತಿಂಗಳ ಡಿಎ ಬಾಕಿಯನ್ನು ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರಿ ನೌಕರರಿಗೆ ನೀಡಿರಲಿಲ್ಲ. ಆದರೆ ಇದೀಗ 7 ನೇ ವೇತನ ಆಯೋಗ ಈಗ ಹೊಸದೊಂದು ಸುದ್ದಿ ನೀಡಿದೆ.

ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ 7ನೇ ವೇತನ (pay commission) ಆಯೋಗ ರಚನೆ ಮಾಡುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಏಳನೇ ವೇತನ (7th Pay Commission) ಆಯೋಗದ ರಚನೆಗೆ ಸಂಬಂಧಿಸಿದಂತೆ ಇನ್ನು ಎರಡೇ ದಿನಗಳಲ್ಲಿ ಆದೇಶ ಹೊರಬೀಳುವ ಸಾಧ್ಯತೆ ಇದೆ. 2023ರ ಮಾರ್ಚ್‌ಒಳಗೆ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ದೀಪಾವಳಿಗೂ ಮುನ್ನ ತುಟ್ಟಿಭತ್ಯೆ ಹೆಚ್ಚಿಸಿದ ನಂತರ ಕೇಂದ್ರ ಸರ್ಕಾರಿ ನೌಕರರು ಮತ್ತೊಂದು ಒಳ್ಳೆಯ ಸುದ್ದಿಗಾಗಿ ಕಾಯುತ್ತಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸ್ಸಿನಿಂದಾಗಿ 13.5 ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ.

ರಾಜ್ಯ ಸರಕಾರಿ ನೌಕರರು ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ನಿರಂತರವಾಗಿ ಬೇಡಿಕೆ ಇಟ್ಟಿದ್ದರು. ಅಲ್ಲದೇ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗವು ಈ ಹಿಂದೆ ವೇತನ ಪರಿಷ್ಕರಣೆ ಮಾಡುವ ಸಂಬಂಧ ಚರ್ಚೆ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನಿಯೋಗದೊಂದಿಗೆ ಚರ್ಚೆ ಮಾಡಿತ್ತು. ಅಕ್ಟೋಬರ್ ಅಂತ್ಯದ ವೇಳೆಗೆ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಂತ್ರಿಯೂ ತಿಳಿಸಿದ್ದರು.

You may also like

Leave a Comment