Home » GOOD NEWS | ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ

GOOD NEWS | ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ

0 comments

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2022 -23ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದೀಗ ಸರ್ಕಾರದ ವತಿಯಿಂದ ಗೌರವಧನ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರದ ವತಿಯಿಂದ 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವಿಳಂಬ ಮಾಡದಂತೆ ಬಿಡುಗಡೆಯಾದ ಅನುದಾನವನ್ನು ತಾಲೂಕು ಪಂಚಾಯಿತಿಗಳ ಮೂಲಕ ತಕ್ಷಣವೇ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ.

ಪ್ರಾಥಮಿಕ ಶಾಲೆಗಳ 27 ಸಾವಿರ ಅತಿಥಿ ಶಿಕ್ಷಕರಿಗೆ 135.66 ಕೋಟಿ ರೂ., ಪ್ರೌಢಶಾಲೆಗಳ 5159 ಅತಿಥಿ ಶಿಕ್ಷಕರಿಗೆ 39.39 ಕೋಟಿ ರೂ. ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ 175.05 ಕೋಟಿ ರೂ. ನೀಡುವ ಮೂಲಕ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ.

You may also like

Leave a Comment