ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್‌ಲಾಗ್ ದ್ವಿತೀಯ ದರ್ಜೆ (Backlog Second Division Clerk) ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸರಕಾರ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಮತ್ತೆ ಹೊಸದಾಗಿ ಅಧಿಸೂಚನೆ ಹೊರಡಿಸಿದೆ.
ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 25 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಸೆಪ್ಟೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
25 ಅಕ್ಟೋಬರ್ 2022
ಶೈಕ್ಷಣಿಕ ಅರ್ಹತೆ: ಜಲಸಂಪನ್ಮೂಲ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು.
ವಿಶೇಷ ಸೂಚನೆ : ಈ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದಿಲ್ಲ. 2001ರ ವಿಶೇಷ ನೇಮಕಾತಿ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಮತ್ತು ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.
ವಯಸ್ಸಿನ ಮಿತಿ: ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
ವಯಸ್ಸಿನ ಸಡಿಲಿಕೆ: ವಿಕಲಚೇತನ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಸಲ್ಲಿಕೆ: ಆನ್‌ಲೈನ್ ಮುಖಾಂತರ
ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯ ಮೆರಿಟ್ ಪಟ್ಟಿ
ವಿಶೇಷ ಸೂಚನೆ: ಈ ಹುದ್ದೆಗೆ ಅಭ್ಯರ್ಥಿಗಳು ಸೆಪ್ಟೆಂಬರ್ 26ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆ.26 ರಂದು ನೇಮಕಾತಿ ಲಿಂಕ್ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
