Home » Gruhalakshmi scheme: ರಾಜ್ಯದ ಮಹಿಳೆಯರೇ `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ!

Gruhalakshmi scheme: ರಾಜ್ಯದ ಮಹಿಳೆಯರೇ `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ!

0 comments
Gruhalakshmi scheme

Gruhalakshmi scheme: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿಯೋಜನೆ ಮೂಲಕ ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ.

ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು ದೂರಿದ್ದಾರೆ. ಇದೀಗ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಹಣ ಜಮೆ ಆಗಿದೆಯೋ ಇಲ್ವೋ ಅನ್ನೋದಕ್ಕೆ ಇಲ್ಲಿದೆ ಮಾಹಿತಿ.ಹೌದು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ! ಹೌದು, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆಯಲಾಗಿದೆ.ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೇ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಖರವಾದ ಮಾಹಿತಿ ಪಡೆಯಬಹುದು.

181ಕ್ಕೆ ಕರೆ ಮಾಡಿದರೆ ಅಲ್ಲಿನ ಆಪರೇಟರ್‌ಗಳು ದೂರುದಾರರಿಂದ ಮಾಹಿತಿ ಪಡೆಯುತ್ತಾರೆ. ನಂತರ ದೂರುದಾರರು ಯಾವ ತಾಲೂಕಿಗೆ ಬರುವರೋ ಆ ತಾಲೂಕಿನ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ರವಾನಿಸುವರು. ಅವರಿಂದ ಮಾಹಿತಿ ಪಡೆದು, ಫಲಾನುಭವಿಗಳಿಗೆ ತಲುಪಿಸುವರು.

You may also like