Home » ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು

ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು

0 comments

ಸಣ್ಣ ಮಕ್ಕಳ ಮೇಲೆ ಇದೀಗ ಪದೇಪದೇ ಪೋಷಕರ ನಿರ್ಲಕ್ಷ್ಯ ಧೋರಣೆ ಎದ್ದುಕಾಣುತ್ತಿದೆ. ಏಕೆಂದರೆ ಇತ್ತೀಚೆಗೆ ಒಂದಿಲ್ಲೊಂದು ಅವಘಡಗಳಲ್ಲಿ ಸಣ್ಣ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಜೋಕಾಲಿ ಆಟವಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಮನೋಜ್ (8), ಮೃತಪಟ್ಟ ಬಾಲಕ. ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಈತ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.

ಪೋಷಕರು ಕೃಷಿ ಕಾರ್ಯಕ್ಕೆಂದು ಬಾಲಕನನ್ನು ಮನೆಯಲ್ಲಿ ಬಿಟ್ಟು ತೆರಳಿದ್ದರು. ಈ ವೇಳೆ ಮನೆಯಲ್ಲಿ ಕಟ್ಟಿದ ಜೋಕಾಲಿಯಲ್ಲಿ ಆಟವಾಡುವ ಸಂದರ್ಭದಲ್ಲಿ, ಕುತ್ತಿಗೆಗೆ ಹಗ್ಗ ಸಿಲುಕಿಕೊಂಕೊಂಡಿದೆ. ಮನೋಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬಾಣವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

You may also like

Leave a Comment