Home » ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

0 comments

ಬೆಂಗಳೂರು : ಕಾಲೇಜು ಅಭಿವೃದ್ಧಿ ಸಮಿತಿ ( ಸಿಡಿಸಿ) ಸೂಚಿಸಿದ ವಸ್ತ್ರ ಸಂಹಿತೆ ಅಳವಡಿಸಿಕೊಂಡ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

ಮಂಗಳವಾರ ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಇಲಾಖೆ, ‘ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ, ಕಾಲೇಜು ಅಭಿವೃದ್ಧಿ ಸಮಿತಿ( ಸಿಡಿಸಿ) ಸೂಚಿಸಿದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿ ಪ್ರವೇಶಿಸದಂತೆ ಸೂಚಿಸಿರುವುದರಿಂದ, ಹೀಗಾಗಿ ಹಿಜಾಬ್ ಧರಿಸಿ ಬಂದವರು ಅದನ್ನು ತೆಗೆದು ತರಗತಿಗೆ ತೆರಳಲು ಅನುಕೂಲ ಆಗುವಂತೆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಥಳದ ವ್ಯವಸ್ಥೆ ‌ಮಾಡಬೇಕು ಎಂದು ಶಾಲಾ, ಕಾಲೇಜುಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ ಇಲಾಖೆ ಸೂಚಿಸಿದೆ.

You may also like

Leave a Comment