Girl Child: ಹೆಣ್ಣು ಮಗುವನ್ನು ಹೊಂದಿರುವ ಪೋಷಕರಿಗೆ ಗುಡ್‌ನ್ಯೂಸ್‌ವೊಂದನ್ನು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ನೀಡಿದ್ದಾರೆ. ಹೌದು. ಮನೆಯಲ್ಲಿ ಒಂದು ಹೆಣ್ಣು ಮಗು ಜನನದ ಮೇಲೆ
ಎರಡು ಲಕ್ಷ ರೂಪಾಯಿ ಮತ್ತು ಹಿಮಾಚಲದಲ್ಲಿ ಇಬ್ಬರು ಹೆಣ್ಣುಮಕ್ಕಳ ಜನ್ಮಕ್ಕೆ 1 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಘೋಷಣೆಯೊಂದನ್ನು ಮಾಡಿದ್ದಾರೆ. ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು. ಹೆಣ್ಣುಮಕ್ಕಳು ಶಿಕ್ಷಣದಿಂದ ಹಿಡಿದು ಸೈನ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದಾರೆ. ಈಗ ಹೆಣ್ಣು ಮಕ್ಕಳ ಬಗ್ಗೆ ಸಮಾಜದ ಮನಸ್ಥಿತಿ ಬದಲಾಗುತ್ತಿದೆ ಎಂಬ ಮಾತನ್ನು ಮುಖ್ಯಮಂತ್ರಿ ಹೇಳಿದ್ದಾರೆ.
ಶಿಮ್ಲಾ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ರಾಜ್ಯದಲ್ಲಿ ಒಬ್ಬ ಹೆಣ್ಣು ಮಗುವಿನ(Girl Child) ಜನನದ ಮೇಲೆ 2 ಲಕ್ಷ ಮತ್ತು ಇಬ್ಬರು ಹೆಣ್ಣುಮಕ್ಕಳ ಜನ್ಮಕ್ಕೆ 1 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ತಡೆಯಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಸಿಎಂ ಹೇಳಿದರು.
ಇಂದಿರಾಗಾಂಧಿ ಹೆಣ್ಣು ಮಕ್ಕಳ ಸಂರಕ್ಷಣಾ ಯೋಜನೆಯಡಿ ಒಂದು ಹೆಣ್ಣು ಮಗುವಿನ ನಂತರ ಕುಟುಂಬ ಯೋಜನೆ ಅಳವಡಿಸಿಕೊಳ್ಳುವ ಕುಟುಂಬಕ್ಕೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು 35 ಸಾವಿರ ರೂ.ಗೆ 2 ಲಕ್ಷ ರೂ.ಗೆ ಹೆಚ್ಚಿಸಿ, ಇಬ್ಬರು ಹೆಣ್ಣು ಮಕ್ಕಳ ನಂತರ ಕುಟುಂಬ ಯೋಜನೆಗೆ ರೂ.25 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಮುಖ್ಯಮಂತ್ರಿ ಸುಖು ಘೋಷಣೆ ಮಾಡಿದ್ದಾರೆ.
