Home » ಸರಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಮಾಡಲು ಯತ್ನಿಸಿದ ಶಿಕ್ಷಕ ;

ಸರಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಮಾಡಲು ಯತ್ನಿಸಿದ ಶಿಕ್ಷಕ ;

by Mallika
0 comments

ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುವ ಚಟುವಟಿಕೆ ನಡೆಯುತ್ತಿದ್ದು, ಈಗ ಈ ಘಟನೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳಿಗೆ ಹೊಲಿಗೆ ವಿಷಯದ ಸಂಬಂಧ ಪಾಠ ಹೇಳುವ ಬದಲು ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುತ್ತಿದ್ದರು. ಈ ವಿಷಯವನ್ನು ವಿದ್ಯಾರ್ಥಿಗಳು ಪೋಷಕರ ಗಮನಕ್ಕೆ ತಂದಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

ಕನ್ನಟ್ಟುವಿಲೈ ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಹೊಲಿಗೆ ವಿಷಯದ ಕುರಿತಾಗಿ ಪಾಠ ಮಾಡುವ ಶಿಕ್ಷಕ ತಮ್ಮ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್ ಪ್ರಾರ್ಥನೆ ಓದುವಂತೆ ಒತ್ತಾಯ ಮಾಡಿದ್ದಾನೆ.

ಪೊಲೀಸರ ಸಮ್ಮುಖದಲ್ಲಿಯೂ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಮುಖ್ಯೋಪಾಧ್ಯಾಯರಿಗೂ ದೂರು ಸಲ್ಲಿಸಲಾಗಿದ್ದು, ಈಗ ಶಿಕ್ಷಕನನ್ನು ಅಮಾನತು ಮಾಡಲಾಗಿದೆ‌

You may also like

Leave a Comment