7th Pay Commission: ಇತ್ತೀಚೆಗೆ ಸಿಎಂ(CM) ನೇತೃತ್ವದ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿ ವಿಚಾರವಾಗಿ ಚರ್ಚೆ ನಡೆದು 7ನೇ ವೇತನ ಆಯೋಗ ಜಾರಿಗೆ ಎಲ್ಲಾ ಸಿದ್ದತೆ ನಡೆಸಿದೆ ಎನ್ನಲಾಗಿತ್ತು. ಇದೀಗ ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ(CM Siddaramaiah)ಹೊಸ ಘೋಷಣೆ ಮಾಡಿದ್ದು ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹೌದು, ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ಸಂಪೂರ್ಣ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿತ್ತು. ಇದೀಗ ಈ ಬಗ್ಗೆ ಅಪ್ಡೇಟ್ ನೀಡಿದ ಸಿದ್ದರಾಮಯ್ಯ ಏಳನೇ ` ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.
ಎಷ್ಟು ಹೆಚ್ಚಾಗಬಹುದು ವೇತನ?
ಆಯೋಗದ ಶಿಫಾರಸಿನಂತೆ ಶೇಕಡ 25ರಷ್ಟು ವೇತನ ಹೆಚ್ಚಳ ಮಾಡಲು ಕೆಲವು ಸಚಿವರು ಸಲಹೆ ನೀಡಿದ್ದು, ಅಂತಿಮವಾಗಿ ಆಯೋಗದ ಶಿಫಾರಸು ಜಾರಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ಸಂಪುಟ ಸಭೆ ನೀಡಿದೆ. ಮುಖ್ಯಮಂತ್ರಿಗಳು ಶೇಕಡ 27ರಷ್ಟು ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಬಂಪರ್ ಲಾಟ್ರಿ ಹೊಡೆದಂತಾಗುತ್ತದೆ.
