Artists and Writers : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ನೀಡುತ್ತಿರುವ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುವ ಕಲಾವಿದರು ಹಾಗೂ ಸಾಹಿತಿಗಳಿಗೆ (Artists and Writers) ಜೀವಿತಾಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ಇಲಾಖೆ ತಿಳಿಸಿದೆ.
2023-24ನೇ ಸಾಲಿನ ಜೀವಿತಾಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು 2023ನೇ ಏಪ್ರಿಲ್ 30 ರೊಳಗೆ ಸಲ್ಲಿಸಬೇಕು. ಈ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು ಅರ್ಜಿಯನ್ನು ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ನಿಗಧಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ : 118, ಚಪ್ಪರದಕಲ್ಲು, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಿಂದ ಪಡೆದುಕೊಳ್ಳಬೇಕು. ಬಳಿಕ ಭರ್ತಿ ಮಾಡಿದ ಜೀವಿತಾವಧಿ ಪ್ರಮಾಣ ಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ(P.P.O) ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿಯನ್ನು ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್.ಡಿ ಸಂಖ್ಯೆ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಬೇಕು.
