1
ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 212 ಮೇಲ್ವಿಚಾರಕ ಹುದ್ದೆಗಳನ್ನು ಕೆಪಿಎಸ್ ಸಿ ಮೂಲಕ ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ವಸತಿ ನಿಲಯಗಳಲ್ಲಿ ಒಟ್ಟು 1142 ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ. ಈ ಪೈಕಿ 211 ಪುರುಷ ಹಾಗೂ 221 ಮಹಿಳಾ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಪ್ರಸ್ತುತ 212 ಹುದ್ದೆಗಳನ್ನು ಕೆಪಿಎಸ್ ಸಿ ಮೂಲಕವೇ ಭರ್ತಿ ಮಾಡಿಕೊಳ್ಳುತ್ತೇವೆ ಎಂದು ವಿಧಾನಸಭೆಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು.
ಇನ್ನು ಸಮಾಜ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿ ನಿಲಯಗಳ ಮೇಲ್ದರ್ಜೆಗೆ ಸಿಎಂ ಬಸವರಾಜ ಬೊಮ್ಮಾಯಿ 250 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
